ಸುಳ್ವಾಡಿ ವಿಷ ಪ್ರಸಾದ : ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

Team Udayavani, Jan 4, 2019, 12:55 AM IST

ಕೊಳ್ಳೇಗಾಲ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದ ವಿಷಪ್ರಾಶನ ಪ್ರಕರಣದ ಆರೋಪಿಗಳಾದ ದೇಗುಲದ ಟ್ರಸ್ಟ್‌ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮಿ, ವ್ಯವಸ್ಥಾಪಕ ಮಾದೇಶ, ಆತನ ಪತ್ನಿ ಅಂಬಿಕಾ ಹಾಗೂ ಅರ್ಚಕ ದೊಡ್ಡಯ್ಯ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಲಯ ಜ.16ಕ್ಕೆ ವಿಸ್ತರಿಸಿ ಆದೇಶ ನೀಡಿತು.

ವಿಷ ಪ್ರಸಾದ ಪ್ರಕರಣದ ನಾಲ್ವರು ಆರೋಪಿಗಳನ್ನು ಪಟ್ಟಣದ ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಲಯಕ್ಕೆ ಗುರುವಾರ ಬೆಳಗ್ಗೆ 11.30ಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಜೆ.ಕೃಷ್ಣ  ಅವರು, “ನಿಮ್ಮ ಪರ ವಕೀಲರನ್ನು ನೇಮಿಸಿಕೊಂಡಿದ್ದೀರಾ’ ಎಂದು ಪ್ರಶ್ನಿಸಿದರು. ಆರೋಪಿಗಳು “ಇಲ್ಲ’ ಎಂದರು. 

ಬಳಿಕ, ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ಜ.16ರವರೆಗೆ ವಿಸ್ತರಿಸಿ ಆದೇಶ ನೀಡಿದರು. ಪ್ರಧಾನ ಸಿವಿಲ್‌ ಹಾಗೂ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಟಿ. ಶ್ರೀಕಾಂತ್‌ ಅವರು ರಜೆಯಲ್ಲಿದ್ದ ಕಾರಣ, ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯಿತು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ