ಕುಮಾರ ಬಜೆಟ್ ನಲ್ಲಿ ‘ಸಮಾಜ ಕಲ್ಯಾಣ’

Team Udayavani, Feb 8, 2019, 11:41 AM IST

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ವಿಧಾನ ಸಭೆಯಲ್ಲಿ ಮಂಡಿಸಿದ 2019-20ನೇ ಸಾಲಿನ ಆಯ-ವ್ಯಯದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಕೆಲವೊಂದು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾಗಿರುವ ಕೆಲವೊಂದು ಯೋಜನೆಗಳು ಈ ರೀತಿಯಾಗಿವೆ.

1) ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ/ ಅಲ್ಪಸಂಖ್ಯಾತರು ಮತ್ತು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 30 ಸಂಯುಕ್ತ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲು 100 ಕೋಟಿ ರೂಪಾಯಿ ಅನುದಾನ.

2) ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 100 ವಸತಿ ಶಾಲೆಗಳನ್ನು ಪಿ.ಯು.ಸಿ.ಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸ್ ಗಳೊಂದಿಗೆ ಮೇಲ್ದರ್ಜೆಗೇರಿಸಲು ಕ್ರಮ.

3) ಬೆಂಗಳೂರು ನಗರದಲ್ಲಿ ಸಂವಿಧಾನ ಮ್ಯೂಸಿಯಂ ಸ್ಥಾಪಿಸಲು 20 ಕೋಟಿ ರೂಪಾಯಿ ಅನುದಾನ.

4) ವಿಭಾಗ ಮಟ್ಟದಲ್ಲಿ 4 ಹಿಂದುಳಿದ ವರ್ಗಗಳ ಮೊರಾರ್ಜಿ ಪದವಿಪೂರ್ವ ಕಾಲೇಜುಗಳಲ್ಲಿ ಐ.ಐ.ಟಿ./ನೀಟ್ ಪರೀಕ್ಷಾ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲು 4 ಕೋಟಿ ರೂಪಾಯಿ ಅನುದಾನ.

5) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 100 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣಕ್ಕೆ 40 ಕೋಟಿ ರೂಪಾಯಿ ಅನುದಾನ.

6) ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ರೂಪಾಯಿ ಅನುದಾನ. ಸಮುದಾಯ ಭವನ ನಿರ್ಮಾಣ ಹಾಗೂ ಅಲೆಮಾರಿ ಜನಾಂಗದ ಸಂಪ್ರದಾಯ, ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಅಧ್ಯಯನಕ್ಕಾಗಿ 11 ಕೋಟಿ ರೂಪಾಯಿ ಅನುದಾನ.

7) ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗಾಗಿ ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ರೂಪಾಯಿ ಅನುದಾನ.

8) ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಶಿವಾರಪಟ್ಟಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರ ಪ್ರಾರಂಭಕ್ಕೆ 10 ಕೋಟಿ ರೂ. ಅನುದಾನ ಮೀಸಲು.

9) ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ರೂ. ಅನುದಾನ. ಸವಿತಾ ಸಮಾಜ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕ್ರಮ.

10) ಹಿಂದುಳಿದ ವರ್ಗಕ್ಕೆ ಸೇರಿದ ಸೂಕ್ಷ್ಮ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 134 ಕೋಟಿ ರೂ. ಅನುದಾನ. ಮತ್ತು ಈ ಸಮುದಾಯಗಳಿಗೆ ಸೇರಿದ ಅನುದಾನವು ನೇರವಾಗಿ ಅವುಗಳಿಗೇ ತಲುಪುವಂತಾಗಲು ಒಬ್ಬ ನೋಡಲ್ ಅಧಿಕಾರಿ ಹಾಗೂ 4 ಅಧಿಕಾರೇತರ ಸದಸ್ಯರನ್ನೊಳಗೊಂಡ ಕಾರ್ಯಾಚರಣೆ ಪಡೆ ಸ್ಥಾಪನೆ.

https://beta.udayavani.com/news-section/state-news/karnataka-state-budget-2019-health-sector

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ