ತಿರುಗಿ ಬಿದ್ದ ಟೀಮ್ ಇಂಡಿಯಾ: ಸರಣಿ ಆಸೆ ಜೀವಂತ 

Team Udayavani, Feb 8, 2019, 9:33 AM IST

ಆಕ್ಲಂಡ್: ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ದ್ವಿತೀಯ ಟಿ-ಟ್ವೆಂಟಿ ಪಂದ್ಯದಲ್ಲಿ ಆತಿಥೇಯ ಕಿವೀಸ್ ವಿರುದ್ಧ ಏಳು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಸರಣಿಯಲ್ಲಿ ತಲಾ ಒಂದು ಪಂದ್ಯ ಗೆದ್ದಿರುವ ಉಭಯ ತಂಡಗಳು ರವಿವಾರ ಸರಣಿ ಜಯಕ್ಕಾಗಿ ಅಂತಿಮ ಪಂದ್ಯದಲ್ಲಿ ಸೆಣಸಾಡಲಿವೆ. 

ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲ್ಯಾಂಡ್ ಎಂಟು ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿದರೆ, ಭಾರತ 18.5 ಓವರ್ ನಲ್ಲಿ ಮೂರು ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು. 


ಭರ್ಜರಿ ಬ್ಯಾಟಿಂಗ್ ನಡೆಸಿದ ಆರಂಭಿಕರಾದ ಶಿಖರ್ ಧವನ್ ಮತ್ತು ನಾಯಕ ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. ರೋಹಿತ್ ಭರ್ಜರಿ ನಾಲ್ಕು ಸಿಕ್ಸರ್ ಗಳೊಂದಿಗೆ 50 ರನ್ ಗಳಿಸಿದರೆ, ಧವನ್ 30 ರನ್ ಗಳಿಸಿ ಔಟಾದರು. ನಂತರ ಧೋನಿ ಜೊತೆಗೂಡಿದ ರಿಷಭ್ ಪಂತ್ 40 ಗಳಿಸಿ ಅಜೇಯರಾದರು. ಪಂತ್ ಗೆ ಉತ್ತಮ ಸಾಥ್ ನೀಡಿದ ಧೋನಿ 20 ರನ್ ಗಳಿಸಿ ನಾಟ್ ಔಟ್ ಆಗಿ ಉಳಿದರು. 

ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ್ದ ಕಿವೀಸ್ 158  ರನ್ ಗಳ ಸಾಧಾರಣ ಮೊತ್ತ ಗಳಿಸಿತ್ತು. ಮಧ್ಯಮ ಕ್ರಮಾಂಕದ ಆಟಗಾರ ಕಾಲಿನ್ ಡಿ ಗ್ರಾಂಡ್ ಹೋಮ್ 50 ರನ್ ಬಾರಿಸಿ ತಂಡದ ಟಾಪ್  ಸ್ಕೊರರ್ ಆದರು. ಕಳೆದ ಪಂದ್ಯದಲ್ಲಿ ದುಬಾರಿಯಾಗಿದ್ದ ಕೃನಾಲ್ ಪಾಂಡ್ಯಾ ತನ್ನ ನಾಲ್ಕು ಓವರ್ ನಲ್ಲಿ ಕೇವಲ 27  ರನ್ ನೀಡಿ ಮೂರು ವಿಕೆಟ್ ಪಡೆದರು. ಖಲೀಲ್ ಅಹಮದ್ ಎರಡು, ಹಾರ್ದಿಕ್ ಪಾಂಡ್ಯಾ ಮತ್ತು ಭುವನೇಶ್ವರ್ ತಲಾ ಒಂದು ವಿಕೆಟ್ ಪಡೆದರು. 


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ