ಇಂದು CM ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ

Team Udayavani, Feb 8, 2019, 2:27 AM IST

ಬೆಂಗಳೂರು: ವಿಧಾನ ಸಭೆಯಲ್ಲಿ ಇಂದು ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಇಂದು ಬೆಳಿಗ್ಗೆ 9 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ಈ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ತುರ್ತು ಪತ್ರಿಕಾಗೋಷ್ಠಿಯನ್ನು ಕರೆದಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.

ಫುಡ್ ಪಾಯ್ಸನ್ ಗೈರಿಗೆ ಕಾರಣ
ಇತ್ತ ವಿಧಾನ ಸಭೆ ಅಧಿವೇಶನಕ್ಕೆ ಗೈರಾಗುವ ಮೂಲಕ ಜೆಡಿ(ಎಸ್) ಪಾಳಯದಲ್ಲಿ ಆತಂಕ ಮೂಡಿಸಿದ್ದ ಶಾಸಕ ನಾರಾಯಣ ಸ್ವಾಮಿ ಅವರು ತಮ್ಮ ಗೈರಿಗೆ ಅನಾರೋಗ್ಯದ ನೆಪವನ್ನು ನೀಡಿದ್ದಾರೆ. ತಾವು ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಡಿಯೋ ಒಂದನ್ನು ರವಾನಿಸಿರುವ ಶಾಸಕ ನಾರಾಯಣ ಸ್ವಾಮಿ ಅವರು ತಾವು ಫುಡ್ ಪಾಯ್ಸನ್ ಸಮಸ್ಯೆಯಿಂದ ಬಳಲುತ್ತಿದ್ದು, ಸದ್ಯ ವೈದ್ಯರ ಸೂಚನೆ ಮೇರೆಗೆ ತಾನು ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು ಇನ್ನು 2-3 ದಿನ ನಾನು ವಿಶ್ರಾಂತಿ ಪಡೆದುಕೊಳ್ಳಲಿದ್ದೇನೆ ಎಂದು ಅವರು ತಾವು ಕಳುಹಿಸಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ