ರಾಜ್ಯ ಬಜೆಟ್; ರೈತರ ಸಾಲಮನ್ನಾ ಯೋಜನೆ ಘೋಷಣೆಗೆ ಸಿಕ್ಕಿದ್ದೆಷ್ಟು?

Team Udayavani, Feb 8, 2019, 9:29 AM IST

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಬಜೆಟ್ ಮಂಡನೆ ಆರಂಭಿಸಿದ್ದರು. ಬಳಿಕ ಬಜೆಟ್ ಪ್ರತಿಯನ್ನು ಕೊಡದಿರುವುದನ್ನು ವಿರೋಧಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ್ದು, ಏತನ್ಮಧ್ಯೆ 2019-20ನೇ ಸಾಲಿನ ಮುಂಗಡಪತ್ರದಲ್ಲಿ ರೈತರ ಸಾಲಮನ್ನಾದ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ರೈತರ ಸಾಲಮನ್ನಾ ಯೋಜನೆಗಾಗಿ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ 12,650 ಕೋಟಿ ರೂಪಾಯಿ ಮೀಸಲಿರಿಸಲಾಗಿದ್ದು, ಸಾಲಮನ್ನಾ ಯೋಜನೆಗಾಗಿ ಈವರೆಗೆ 18,650 ಕೋಟಿ ರೂಪಾಯಿ ಬಿಡುಗಡೆ ಮಾಡಿದಂತಾಗಿದೆ.

2019ರ ಜೂನ್ ನೊಳಗೆ ಸಹಕಾರಿ ಬ್ಯಾಂಕ್ ಗಳ ಸಾಲಮನ್ನಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ವಾಣಿಜ್ಯ ಬ್ಯಾಂಕ್ ಗಳ ಸಾಲಮನ್ನ ಪ್ರಕ್ರಿಯೆ ಪೂರ್ಣಕ್ಕೆ 2020ರ ಮಾರ್ಚ್ ವರೆಗೆ ಅವಕಾಶವಿದೆ. ವಾಣಿಜ್ಯ ಬ್ಯಾಂಕ್ ಗಳಿಗೆ 6,500 ಕೋಟಿ ರೂ. ಮೀಸಲಿರಿಸಲಾಗಿದೆ. ಒಟ್ಟು 34 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಆಗಬೇಕಾಗಿದೆ.

2019-20ನೇ ಸಾಲಿನ ಅಯವ್ಯಯದಲ್ಲಿ ಕೃಷಿ ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಒಟ್ಟು 46,853 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಟ್ಟಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ