ಇ.ಡಿ ಸಮನ್ಸ್‌: ಸಚಿವ ಡಿಕೆಶಿ ಸದ್ಯ ನಿರಾಳ

Team Udayavani, Feb 8, 2019, 1:13 AM IST

ಬೆಂಗಳೂರು: ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವ ದಿನಾಂಕ ಮುಂದೂಡುವಂತೆ ಕೋರಿ ಪ್ರಕರಣದ ಆರೋಪಿ ಹಾಗೂ ಅರ್ಜಿದಾರರೂ ಆಗಿರುವ ಸಚಿವ ಡಿ.ಕೆ. ಶಿವಕುಮಾರ್‌ ಮನವಿ ಸಲ್ಲಿಸಿದರೆ, ಪರಿಗಣಿಸಲಾಗುವುದು ಎಂದು ಜಾರಿ ನಿರ್ದೇಶನಾಲಯ ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ.

ಐ.ಟಿ.ದಾಳಿ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಇ.ಡಿ ಜಾರಿಗೊಳಿಸಿರುವ ಸಮನ್ಸ್‌ ರದ್ದುಪಡಿಸುವಂತೆ ಕೋರಿ ಸಚಿವ ಶಿವಕುಮಾರ್‌ ಮತ್ತಿತರ ಆರೋಪಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಅರವಿಂದ್‌ ಕುಮಾರ್‌ ಅವರಿದ್ದ ಪೀಠಕ್ಕೆ ಹೆಚ್ಚುವರಿ ಸಾಲಿಸಿಟರ್‌ ಜನರಲ್ ಪ್ರಭುಲಿಂಗ ಕೆ. ನಾವದಗಿ ಈ ಮಾಹಿತಿ ನೀಡಿದರು. ಇದರಿಂದ ಶುಕ್ರವಾರ (ಫೆ.8) ಇ.ಡಿ ವಿಚಾರಣೆ ಎದುರಿಸಬೇಕಿದ್ದ ಸಚಿವ ಡಿ.ಕೆ. ಶಿವಕುಮಾರ್‌ಗೆ ಸದ್ಯ ರಿಲೀಫ್‌ ಸಿಕ್ಕಂತಾಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ