ಆಡಿಯೋ ಬಾಂಬ್: ಯಡಿಯೂರಪ್ಪ ವಿರುದ್ಧ ಸ್ಪೀಕರ್ ಗೆ CM ದೂರು

Team Udayavani, Feb 8, 2019, 7:26 AM IST

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೂ ಮುನ್ನ ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪಕ್ಷದ ಶಾಸಕರಿಗೆ ಅಧಿಕಾರ ಮತ್ತು ಹಣದ ಆಮಿಷ ಒಡ್ಡುವ ಸರಣಿ ಆಡಿಯೋ ಕ್ಲಿಪ್ ಗಳನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಳಿಕ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರಿಗೆ ಬಿ.ಎಸ್.ವೈ ಮತ್ತು ತಂಡದ ವಿರುದ್ಧ ದೂರೊಂದನ್ನು ಸಲ್ಲಿಸಿದ್ದಾರೆ.

ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಯಡಿಯೂರಪ್ಪ ಅವರು ಮೈತ್ರಿ ಸರಕಾರದ ಶಾಸಕರಿಗೆ ಹಣ ಮತ್ತು ಅಧಿಕಾರದ ಆಮಿಷವನ್ನು ಒಡ್ಡಿದ್ದಾರೆ. ಇಷ್ಟು ಮಾತ್ರವಲ್ಲದೇ ವಿಧಾನಸಭಾಧ್ಯಕ್ಷರಾದ ತಮ್ಮ ಬಗ್ಗೆಯೇ ಹಗುರವಾಗಿ ಮಾತನಾಡಿರುವುದು ಮಾತ್ರವಲ್ಲದೇ ಸ್ಪೀಕರ್ ಅವರನ್ನೂ ‘ಬುಕ್’ ಮಾಡಿಕೊಳ್ಳಲಾಗಿದೆ ಎಂದು ಹೇಳಿರುವುದು ಗಂಭೀರ ವಿಚಾರವಾಗಿದೆ ಎಂದು ಕುಮಾರಸ್ವಾಮಿಯವರು ಸ್ಪೀಕರ್ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಎಲ್ಲಾ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ ವಿಧಾನಸಭಾ ನಿಯಮಾವಳಿಗಳ ಅನ್ವಯ ಯಡಿಯೂರಪ್ಪ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ